ಅಭಿಪ್ರಾಯ / ಸಲಹೆಗಳು

ಮಾಹಿತಿ ಹಕ್ಕು 4(1)A ಮತ್ತು 4(1)B

ಮಾಹಿತಿಹಕ್ಕುಕಾಯ್ದೆ 4(1)A

ಕಾಯ್ದೆಯಬಗ್ಗೆ 

ಪ್ರತಿಯೊಂದು ಸಾರ್ವಜನಿಕ ಪ್ರಾಧಿಕಾರವು, 

ಈ ಅಧಿನಿಯಮದಅಡಿಯಲ್ಲಿ ಮಾಹಿತಿಹಕ್ಕಿಗಾಗಿ ಅನುಕೂಲ ಮಾಡಿಕೊಡುವ ರೀತಿಯಲ್ಲಿ ಮತ್ತು ನಮೂನೆಯಲ್ಲಿ ಕ್ರಮಬದ್ಧ ಸೂಚಿಪಟ್ಟಿ ಮತ್ತು ಸೂಚೀಕರಣಗೊಂಡ ಅದರ ಎಲ್ಲಾದಾಖಲೆಗಳನ್ನು ನಿರ್ವಹಿಸತಕ್ಕದ್ದು ಮತ್ತು ಸೂಕ್ತ ಸಮಯದೊಳಗಾಗಿ ಮತ್ತು ಸಂಪನ್ಮೂಲಗಳ ಲಭ್ಯತೆಗೊಳಪಟ್ಟು, ಗಣಕೀಕರಣಕ್ಕೆ ಸೂಕ್ತವಾದ ಎಲ್ಲದಾಖಲೆಗಳನ್ನು ಗಣಕೀಕರಿಸುವಂತೆ ಮತ್ತು ಅಂತಹದಾಖಲೆಗಳು ಸುಲಭವಾಗಿ ದೊರೆಯುವಂತೆ ದೇಶಾದ್ಯಂತ ವಿವಿಧ ಸಿಸ್ಟಂಗಳಲ್ಲಿ ಸಂಪರ್ಕಜಾಲದ ಮೂಲಕ ಸಂಪರ್ಕ ಕಲ್ಪಿಸುವಂತೆ ಮಾಡತಕ್ಕದ್ದು;

  ಮಾಹಿತಿ ಹಕ್ಕು ಅಧಿನಿಯಮ 2005ರಡಿ ನಿಯಮ 4.1(ಎ)ಗೆ ಸಂಬಂಧಿಸಿದಂತೆ ಇಲಾಖೆಯ ಮಾಹಿತಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಸಚಿವಾಲಯದ ಇಲಾಖೆಯ ಪತ್ರ ಹಾಗೂ ಕಡತಗಳ ಚಲನವಲನ ,ಮುಕ್ತಾಯಗೊಂಡಿರುವ ಕಡತ ಹಾಗೂ ಪತ್ರಗಳ ಸಂಪೂರ್ಣ ವಿವರಗಳನ್ನು ಗಣಕೀಕೃತಗೊಳಿಸಿ, ಸಚಿವಾಲಯದ ಅಂತರ್ಜಾಲ http://www.karnataka.gov.in ನಲ್ಲಿ ಲಭ್ಯಪಡಿಸಲಾಗಿದ್ದು,  ಆರ್ಥಿಕ ಇಲಾಖೆಯನ್ನು ಆಯ್ಕೆ ಮಾಡಿಕೊಂಡು ಮಾಹಿತಿಯನ್ನು ಪಡೆದುಕೊಳ್ಳಬಹುದು​.

ಮಾಹಿತಿಹಕ್ಕು 4(1)B 

ಕಾಯ್ದೆಯಬಗ್ಗೆ 

 ಈ ಅಧಿನಿಯಮವನ್ನು ಅಧಿನಿಯಮಿತಿಗೊಳಿಸಿದ ದಿನಾಂಕದಿಂದ ಒಂದುನೂರ ಇಪ್ಪತ್ತುದಿನಗಳೊಳಗಾಗಿ-​​

  1. ಅದರ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳನ್ನು;
  2. ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು;
  3. ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳುಸೇರಿದಂತೆ ತೀರ್ಮಾನತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನವನ್ನು;
  4. ಅದರಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವಸೂತ್ರಗಳನ್ನು;
  5. ಅದರಕಾರ್ಯಗಳನ್ನುನೆರವೇರಿಸುವುದಕ್ಕಾಗಿಅದುಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ಅಥವಾ ಅದರಉದ್ಯೋಗಿಗಳು ಬಳಸುವನಿಯಮಗಳು, ವಿನಿಯಮಗಳು,ಅನುಸೂಚಿಗಳು, ಕೈಪಿಡಿಗಳುಮತ್ತುದಾಖಲೆಗಳನ್ನು;
  6. ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ ವಿವರಪಟ್ಟಿಯನ್ನು;
  7. ಅದರಕಾರ್ಯನೀತಿಯರಚನೆ ಅಥವಾ ಅದರಅನುಷ್ಠಾನಕ್ಕೆ  ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅವರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ ಯಾವುದೇ ವ್ಯವಸ್ಥೆಯ ವಿವರಗಳನ್ನು;
  8. ಮಂಡಳಿಗಳು, ಪರಿಷತ್ತಗಳು, ಸಮಿತಿಗಳು ಅಥವಾ ಇತರ ನಿಕಾಯಗಳು ಮತ್ತು ಅದರಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚು ವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತುಗಳ, ಸಮಿತಿಗಳ ಮತ್ತು ಇತರ ನಿಕಾಯಗಳ ಸಭೆಗಳುಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡಾವಳಿಗಳು ಸಾರ್ವಜನಿಕರಿಗೆ ದೊರೆಯುತ್ತವೆಯೇ ಎಂಬುದರವಿವರಪಟ್ಟಿಕೆಯನ್ನು;
  9. ಅದರಅಧಿಕಾರಿಗಳಮತ್ತುನೌಕರರನಿರ್ದೇಶಿಕೆಯನ್ನು;
  10. ಅದರ ವಿನಿಯಮಗಳಲ್ಲಿ ಉಪಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನವನ್ನು;
  11. ಎಲ್ಲ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ; ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದ ಆಯವ್ಯಯವನ್ನು,
  12. ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳನ್ನು;
  13. ಅದು ನೀಡಿರುವ ರಿಯಾಯಿತಿಗಳನ್ನು, ಅನುಮತಿಪತ್ರಗಳನ್ನುಅಥವಾ ಅಧಿಕಾರಪತ್ರಗಳನ್ನು ಪಡೆಯುವವರ ವಿವರಗಳನ್ನು;
  14. ಅದರ ಬಳಿಲಭ್ಯವಿರುವ ಅಥವಾ ಅದುಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ,ಮಾಹಿತಿಗೆ ಸಂಬಂಧಿಸಿದವಿವರಗಳನ್ನು;
  15. ಸಾರ್ವಜನಿಕ ಉಪಯೋಗಕ್ಕಾಗಿಗ್ರಂಥಾಲಯವನ್ನುಅಥವಾ ವಾಚನಾಲಯವನ್ನುನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವಸೌಲಭ್ಯಗಳವಿವರಗಳನ್ನು;
  16. ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳುಮತ್ತುಇತರವಿವರಗಳನ್ನು;

        ನಿಯಮಿಸಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆತರುವಾಯ ಪ್ರತಿವರ್ಷ ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕ್ಕದ್ದು.​

 

2019-20 ನೇ ಸಾಲಿನ ಮಾಹಿತಿ ಹಕ್ಕು 4(೧)ಎ ಮತ್ತು 4(೧)ಬಿ ದಾಖಲೆಗಳು

 

2020-21 ನೇ ಸಾಲಿನ ಮಾಹಿತಿ ಹಕ್ಕು 4(೧)ಎ ಮತ್ತು 4(೧)ಬಿ ದಾಖಲಾತಿಗಳು

 

2021-22 ನೇ ಸಾಲಿನ ಮಾಹಿತಿ ಹಕ್ಕು 4(೧)ಎ ಮತ್ತು 4(೧)ಬಿ ದಾಖಲಾತಿಗಳು

 

2022-23 ನೇ ಸಾಲಿನ ಮಾಹಿತಿ ಹಕ್ಕು 4(೧)ಎ ಮತ್ತು 4(೧)ಬಿ ದಾಖಲಾತಿಗಳು

 

ಇತ್ತೀಚಿನ ನವೀಕರಣ​ : 07-01-2023 01:26 PM ಅನುಮೋದಕರು: Approver kpwd


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಲೋಕೋಪಯೋಗಿ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080